ಶಿವಮೊಗ್ಗ | ಭಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಸೋಮವಾರ ವರೆಗೆ ನಿಷೇಧಾಜ್ಞೆ ವಿಸ್ತರಣೆ

Prasthutha|

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪರಿಸ್ಥಿತಿ ನಿಯಂತ್ರಿಸಲು ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಸೋಮವಾರ ವರೆಗೆ ಮುಂದುವರಿಯಲಿದೆ. ನಗರದಲ್ಲಿ ಇನ್ನೂ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಡಿ.7ರ ವರೆಗೆ ವಿಸ್ತರಿಸಿ ತಹಾಶೀಲ್ದಾರ್ ನಾಗರಾಜ್ ಆದೇಶ ಮಾಡಿದ್ದಾರೆ.

ಡಿ. 3ರಂದು ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯ ಕಾರಣವಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೀಗಾಗಿ ಡಿ.5ರ ವರೆಗೆ ನಿಷೇಧಾಜ್ಞೆ ಹೇರಲಾಗಿತ್ತು. ಇದೀಗ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

- Advertisement -