ಶಿವಮೊಗ್ಗ ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ತೆಕ್ಕೆಗೆ: ಬಿಜೆಪಿಗೆ ಮುಖಭಂಗ

Prasthutha|

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

- Advertisement -

ಒಟ್ಟು 13ಕ್ಷೇತ್ರಗಳ ಪೈಕಿ ಒಂದು ಬಿಜೆಪಿ ಹಾಗು ಒಂದು ರಾಷ್ಟ್ರ ಭಕ್ತರ ಬಳಗ ಗೆಲುವು ಪಡೆದುಕೊಂಡಿದೆ ಉಳಿದ 11ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಬಿಜೆಪಿಯಿಂದ ಶಿಕಾರಿಪುರದ ಡಿ.ಎಲ್.ಬಸವರಾಜ್​ ಮಾತ್ರ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್​ ಬಿಜೆಪಿ ಪೈಪೋಟಿ ಮಧ್ಯ ಸ್ಪರ್ಧೆ ಮಾಡಿದ್ದ ಕೆ ಎಸ್.ಈಶ್ವರಪ್ಪನವರ ರಾಷ್ಟ್ರಭಕ್ತ ಬಳಗದ ಮಹಾಲಿಂಗಶಾಸ್ತ್ರಿ ಅವರು ಗೆಲುವಿನ ನಗೆ ಬೀರಿದ್ದಾರೆ.

- Advertisement -

ಬಿಜೆಪಿ ಕೇವಲ ಒಂದೇ ಸ್ಥಾನ ಗೆಲ್ಲುವಲ್ಲಿ ಸಫಲವಾಗಿದ್ದು, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಮುಖಭಂಗವಾಗಿದೆ.

Join Whatsapp
Exit mobile version