Home ಟಾಪ್ ಸುದ್ದಿಗಳು ಶಿವಮೊಗ್ಗ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ಕಾನೂನು ಪ್ರಕಾರ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ; ಕಾನೂನು ಪ್ರಕಾರ ಕಠಿಣ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ವೃತ್ತದಲ್ಲಿ 18 ವರ್ಷಗಳಿಂದ ಇದ್ದ ಗಾಂಧಿ ಪ್ರತಿಮೆಯನ್ನು ನಿನ್ನೆ (ಸೋಮವಾರ) ತಡರಾತ್ರಿ 2 ಗಂಟೆಯ ಸುಮಾರಿಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ದುಷ್ಕೃತ್ಯ ಎಸಗಿದವರನ್ನು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಪೊಲೀಸ್ ವರಿಷ್ಟಧಿಕಾರಿ ಮಿಥುನ್ ಕುಮಾರ್ ಜಿ.ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ತಡೆದು ವೃತ್ತದ ಬಳಿ ಗಾಂಧಿ ಫೋಟೋ ಇಟ್ಟು ಪ್ರತಿಭಟಿಸಿದ ಜನರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp
Exit mobile version