ಶಿವಮೊಗ್ಗ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಅರೆ ಬೆತ್ತಲೆ ಪ್ರತಿಭಟನೆ

Prasthutha: May 27, 2022

ಹೊಸನಗರ: ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಅರೆಬೆತ್ತೆಲೆಯಾಗಿ ತಾಲೂಕು ಪಂಚಾಯಿತಿ ಕಚೇರಿ ಗುಡಿಸುವ ಮೂಲಕ ಪ್ರತಿಭಟನೆ ನಡೆಸಿದ ಘಟನೆ ಮೂಡುಗೊಪ್ಪ ಗ್ರಾಮದಲ್ಲಿ ನಡೆದಿದೆ.

ಮೂಡುಗೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು  ಈ ರೀತಿ ಪ್ರತಿಭಟನೆ ನಡೆಸಿದ ವ್ಯಕ್ತಿ.

ಈ ಬಗ್ಗೆ  ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಗಿರುವ ಅಧಿಕಾರ ಕಸಿದುಕೊಂಡು, ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಹಿಯನ್ನು ಪಡೆಯದೇ ಅಕ್ರಮವಾಗಿ ಪಟ್ಟಿ ತಯಾರಿಸಿ, ನಮ್ಮ ಕೆಲಸವನ್ನು ತಾಲೂಕು ಪಂಚಾಯಿತಿ ಇಒ ಮತ್ತು ಇತರೆ ಅಧಿಕಾರಿಗಳು ನಿರ್ವಹಿಸಿದ ಕಾರಣ ತಾಲೂಕು ಪಂಚಾಯಿತಿ ಕಚೇರಿಗೆ ತೆರಳಿ ಕಸಗುಡಿಸುವ ಮೂಲಕ ಪ್ರತಿಭಟಿಸಲಾಗಿದೆ’ ಎಂದು ತಿಳಿಸಿದರು.

‘ನರೇಗಾ ಯೋಜನೆಯಡಿ ಗ್ರಾಮಸಭೆಯಲ್ಲಿ ನಿರ್ಣಯಗೊಂಡ ಫಲಾನುಭವಿಗಳಿಗೆ ಅಡಿಕೆ ಗಿಡ ನೆಡಲು ಅನುದಾನ ನೀಡುವ ಅಧಿಕಾರ ಗ್ರಾಮ ಪಂಚಾಯಿತಿಗಳಿಗಿದೆ. ಆದರೆ, ಗ್ರಾಮ ಪಂಚಾಯಿತಿಗೆ ಯಾವುದೇ ಮಾಹಿತಿ ನೀಡದ ತೋಟಗಾರಿಕಾ ಇಲಾಖಾ ಅಧಿಕಾರಿಗಳು, ಲಂಚ ಪಡೆದು ಫಲಾನುಭವಿಗಳನ್ನು ಗುರುತಿಸಿ, ಪಟ್ಟಿಯನ್ನು ತಾಲೂಕು ಪಂಚಾಯಿತಿ ಸಿಇಒ ಗೆ ಕಳುಹಿಸಿ ಮಂಜೂರು ಪಡೆದಿದ್ದಾರೆ’ ಎಂದು  ದೂರಿದರು.

 ‘ಜಿಲ್ಲಾ ಪಂಚಾಯಿತಿ ಸಿಇಒ ಅವರು ಈ ಬಗ್ಗೆ ಕೂಡಲೇ ಮಧ್ಯ ಪ್ರವೇಶಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಆಗ್ರಹಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!