ತೀರ್ಥಹಳ್ಳಿ: ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರನ್ನು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಲೋಕಾರ್ಪಣೆ ಗೊಳಿಸಿದರು.
ಈ ವೇಳೆ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, ಈ ಭಾಗದ ಜನತೆಗೆ ಅತ್ಯಗತ್ಯ ವಾದ ಸೌಲಭ್ಯ ದೊರಕಿದ್ದು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ ಎಂದು ತಿಳಿಸಿದರು.
ಕಳೆದ ನಾಲ್ಕು ವರ್ಷದಲ್ಲಿ ನೆರಟುರು ಪಂಚಾಯ್ತಿ ವ್ಯಾಪ್ತಿ ಯಲ್ಲಿ ಸುಮಾರು 6.8 ಕೋಟಿ ರೂ. ವಿವಿಧ ಅಭಿವೃದ್ದಿ ಕಾರ್ಯ ಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣ ಗೊಂಡಿವೆ. ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಎಂದು ತಿಳಿಸಿದರು.
ಸುಮಾರು ಎಂಟು ಕಿಮೀ ವ್ಯಾಪ್ತಿಯ ಗ್ರಾಮಗಳ ಜನರ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.