Home ಟಾಪ್ ಸುದ್ದಿಗಳು ಶಿವಮೊಗ್ಗ: ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ: ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್ ನನ್ನು ಪೀಡಿಸುತ್ತಿದ್ದಳು ಎನ್ನಲಾಗಿದೆ. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು.

Join Whatsapp
Exit mobile version