ಶಿವಮೊಗ್ಗ | ಗುಂಪು ಘರ್ಷಣೆ: 9 ಮಂದಿ ವಶಕ್ಕೆ

Prasthutha|

ಶಿವಮೊಗ್ಗ: ತಡರಾತ್ರಿ ಹಾರೊ ಬೆನವಳ್ಳಿ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು 9 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -


ಹಾರೊ ಬೆನವಳ್ಳಿ ಗ್ರಾಮದಲ್ಲಿ ಪ್ರತಿಯೊಬ್ಬರಿಗೆ ಸೈಟ್ ನೀಡಲಾಗಿತ್ತು. ಸೈಟ್ ವಿಚಾರಕ್ಕೆ ಎರಡು ಗುಂಪಿನಲ್ಲಿ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ.


ವಿಚಾರ ತಿಳಿಯುತ್ತಿದ್ದಂತೆ ಹೊಳೆ ಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗುಂಪು ಘರ್ಷಣೆಯನ್ನು ತಪ್ಪಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಡಿಎಆರ್ ಹಾಗೂ ಹೊಳೆಹೊನ್ನೂರು ಪೊಲೀಸರು ಮೊಕ್ಕಾಂ ಹೂಡಿದ್ದು, ಸದ್ಯ ಪರಿಸ್ಥಿತಿ ಶಾಂತವಾಗಿದೆ.

Join Whatsapp