Home ಟಾಪ್ ಸುದ್ದಿಗಳು ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿವಾದದ ಗಲಭೆ ಹಿನ್ನೆಲೆ; ಮುಂದುವರಿದ ನಿಷೇಧಾಜ್ಞೆ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿವಾದದ ಗಲಭೆ ಹಿನ್ನೆಲೆ; ಮುಂದುವರಿದ ನಿಷೇಧಾಜ್ಞೆ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿನಡೆದ ಗಲಭೆಯ ಬಳಿಕ ಜಿಲ್ಲೆಯ ಸೆಕ್ಷನ್ 144 ಜಾರಿಯಲ್ಲಿದ್ದು,ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಈ ಮಧ್ಯೆ  ಘಟನೆಗೆ ರಾಜಕೀಯ ಬಣ್ಣ ಬೆರೆತಿದ್ದು, ಬಿಜೆಪಿ-ಕಾಂಗ್ರೆಸ್ ನಾಯಕರ ಮಧ್ಯೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ಪ್ರಾರಂಭವಾಗಿವೆ.ಘಟನೆಗೆ ಕಾಂಗ್ರೆಸ್ ನಾಯಕರು ಕಾರಣ ಎಂದು ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದಲ್ಲಿ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸಲಿವೆ.  ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದು ಭದ್ರತೆಯ ಭಾಗವಾಗಿ

ನಗರದಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದ್ದು, ನಗರದ ಹಳೆ ಭಾಗಗಳು ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.

Join Whatsapp
Exit mobile version