Home ಟಾಪ್ ಸುದ್ದಿಗಳು ಶಿವಮೊಗ್ಗ ಚೂರಿ ಇರಿತ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗ ಚೂರಿ ಇರಿತ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗ: ಪ್ರೇಮ್ ಸಿಂಗ್ ಎಂಬಾತನಿಗೆ ಆತನ ಮನೆ ಮುಂದೆ ಚೂರಿ ಇರಿತವಾಗಿದ್ದು , ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.


ಉಪ್ಪಾರ ಕೇರಿಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರೇಮ್ ಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದರು. ಆ ಪ್ರಕರಣದ ಆರೋಪಿ ಎನ್ನಲಾದ ಜಬೀಉಲ್ಲಾ ಎಂಬಾತನ ಕಾಲಿಗೆ ಪೊಲೀಸರು ತಡರಾತ್ರಿ ಫೈರಿಂಗ್ ಮಾಡಿದ್ದಾರೆ.


ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದು, ಸದ್ಯ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ನಿಗದಿಯಾಗಿದ್ದ ಕುವೆಂಪು ವಿವಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.
ನಿಷೇಧಾಜ್ಞೆಯನ್ನು ಮತ್ತೆರಡು ದಿನ ವಿಸ್ತರಿಸಲಾಗಿದೆ. ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಎಡಿಜಿಪಿ ಅಲೋಕ್ ಕುಮಾರ್ ಅವರು ಶಿವಮೊಗ್ಗದಲ್ಲಿ ಬೀಡು ಬಿಟ್ಟಿದ್ದು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆರೋಪಿಗಳ ಮಾಹಿತಿ ಲಭ್ಯವಾಗಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



Join Whatsapp
Exit mobile version