Home ಟಾಪ್ ಸುದ್ದಿಗಳು ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ | ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ, ಹಿಂದೂಗಳು ಇದ್ದರು: ಎಸ್’ಪಿ ಸ್ಪಷ್ಟನೆ

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ | ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ, ಹಿಂದೂಗಳು ಇದ್ದರು: ಎಸ್’ಪಿ ಸ್ಪಷ್ಟನೆ

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಒಮ್ನಿ ವಾಹನಗಳಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದು, ವಾಹನ ದಾವಣಗೆರೆ ಜಿಲ್ಲೆಯ ನ್ಯಾಮತಿ ನ್ಯಾಮತಿಗೆ ಸೇರಿದ್ದು. ವಾಹನದಲ್ಲಿ ಎರಡೂ ಸಮುದಾಯದ ಜನರೂ ಇದ್ದರು ಎಂದು ಹೇಳಿದ್ದಾರೆ.


ಒಮ್ನಿ ವಾಹನದಲ್ಲಿ ಬಂದವರು ದಾವಣಗೆರೆ ಜಿಲ್ಲೆ ನ್ಯಾಮತಿಯವರು. ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಇದ್ದರು. ಎಲ್ಲರೂ ಸ್ನೇಹಿತರು. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ನೋಡಲು ಬಂದವರು ರಾಗಿಗುಡ್ಡಕ್ಕೂ ಬಂದಿದ್ದಾರೆ. ಅಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆಯೇ ಅವರೆಲ್ಲರೂ ತಮ್ಮೂರಿಗೆ ಮರಳಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ವಾಹನಗಳ ಪತ್ತೆ ಮಾಡಿ ಪರಿಶೀಲನೆ ವೇಳೆ ಅವರು ನ್ಯಾಮತಿಯವರು ಎಂದು ತಿಳಿದುಬಂದಿದೆ. ಈ ವಿಚಾರದಲ್ಲಿ ಸಾರ್ವಜನಿಕರು ಯಾವುದೇ ಅಪಪ್ರಚಾರ, ವದಂತಿಗಳಿಗೆ ಕಿವಿಗೊಡಬಾರದು ಎಂದು ಎಸ್ಪಿ ಮನವಿ ಮಾಡಿದ್ದಾರೆ.

Join Whatsapp
Exit mobile version