ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ನಗರದಲ್ಲಿದ್ದ ಅನಧಿಕೃತ ಫ್ಲೆಕ್ಸ್ಗಳನ್ನು ತೆರವುಗೊಳಿಸಿದರು.
ಪಾಲಿಕೆ ಆಯುಕ್ತ ಮಾಯಣ್ಣಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಹಲವು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಶೇ 80 ರಷ್ಟು ಫ್ಲೆಕ್ಸ್ ತೆರವುಗೊಳಿಸಿದ್ದೇವೆ. ಉಳಿದವು ತಾಂತ್ರಿಕ ಕಾರಣದಿಂದ ತೆಗೆಯಲು ಸಾಧ್ಯವಾಗಿಲ್ಲ. ಮಂಗಳವಾರ ರಾತ್ರಿ ವೇಳೆಗೆ ಕಾರ್ಯಾಚರಣೆ ಪೂರ್ತಿಯಾಗಲಿದೆ ಎಂದು ತಿಳಿಸಿದರು.