ಶಿವಮೊಗ್ಗ: ಗಲಭೆ ಹಿನ್ನೆಲೆ; ಅನಧಿಕೃತ ಫ್ಲೆಕ್ಸ್ ಗಳ ತೆರವು

Prasthutha|

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ  ಸೋಮವಾರ ರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ನಗರದಲ್ಲಿದ್ದ  ಅನಧಿಕೃತ ಫ್ಲೆಕ್ಸ್ಗಳನ್ನು ತೆರವುಗೊಳಿಸಿದರು.

- Advertisement -

ಪಾಲಿಕೆ ಆಯುಕ್ತ ಮಾಯಣ್ಣಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಹಲವು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಶೇ 80 ರಷ್ಟು ಫ್ಲೆಕ್ಸ್ ತೆರವುಗೊಳಿಸಿದ್ದೇವೆ. ಉಳಿದವು ತಾಂತ್ರಿಕ ಕಾರಣದಿಂದ ತೆಗೆಯಲು ಸಾಧ್ಯವಾಗಿಲ್ಲ. ಮಂಗಳವಾರ ರಾತ್ರಿ ವೇಳೆಗೆ ಕಾರ್ಯಾಚರಣೆ ಪೂರ್ತಿಯಾಗಲಿದೆ ಎಂದು ತಿಳಿಸಿದರು.



Join Whatsapp