ಶಿವಮೊಗ್ಗ: ಪೊಲೀಸ್ ಸಿಬ್ಬಂದಿಯನ್ನು ಬಾನೆಟ್ ಮೇಲೆ ಹೊತ್ತೋಯ್ದ ಕಾರು ಚಾಲಕ..!

Prasthutha|

- Advertisement -

ಶಿವಮೊಗ್ಗ: ತಪಾಸಣೆ ಮಾಡುವ ವೇಳೆ ಕಾರು ಗುದ್ದಿ ಬ್ಯಾನೆಟ್‍ ಮೇಲೆ ಪೊಲೀಸ್​ ಸಿಬ್ಬಂದಿಯನ್ನು ಹತ್ತಿಸಿಕೊಂಡು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವಂತಹ ಘಟನೆ ನಗರದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ.

ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಮಿಥುನ್ ಜಗದಾಳೆ ಎಂಬಾತರನ್ನು ಬಂಧಿಸಲಾಗಿದೆ.

- Advertisement -

ಸದ್ಯ ಕಾರು ವಶಕ್ಕೆ ಪಡೆದುಕೊಂಡಿದ್ದು, ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂರ್ವ ಠಾಣೆ ಟ್ರಾಫಿಕ್​ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ತಪಾಸಣೆ ವೇಳೆ ಕಾರಿನ ಮುಂದೆ ಬಂದು ಕಾರು ನಿಲ್ಲಿಸುವಂತೆ ಟ್ರಾಫಿಕ್ ಸಿಬ್ಬಂದಿ ಸೂಚಿಸುತ್ತಿದ್ದರು. ಕಾರು ತಡೆಯದೇ ಸಿಬ್ಬಂದಿ ಮೇಲೆ ಚಾಲಕ ಹತ್ತಿಸಲು ಮುಂದಾಗಿದ್ದಾನೆ. ಕಾರಿನ ಬ್ಯಾನೆಟ್‍ ಮೇಲೆ ಸಿಬ್ಬಂದಿ ಬಿದ್ದರು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ. ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



Join Whatsapp