ಶಿವಮೊಗ್ಗ: ಜೆಸಿ ಆಸ್ಪತ್ರೆಯಲ್ಲಿ ಹೆಚ್ಚಿದ ಕಳ್ಳರ ಹಾವಳಿ

Prasthutha|

ತೀರ್ಥಹಳ್ಳಿ: ನಗರದ ಜೆಸಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದೇ ಕಳ್ಳರ ಹಾವಳಿ ಶುರುವಾಗಿದೆ ಎಂದು ತಿಳಿದು ಬಂದಿದೆ.

- Advertisement -


ರೋಗಿಯ ಕಡೆಯವನು ಎಂದು ಹೇಳಿ ಆಸ್ಪತ್ರೆಯ ಒಳಗೆ ಬಂದ ಯುವಕನೊಬ್ಬ ರೋಗಿಯೊಬ್ಬರ ಮೊಬೈಲ್ ಕಳ್ಳತನ ಮಾಡಲು ಯತ್ನಿಸಿದ್ದ. ಆದರೆ ಆಸ್ಪತ್ರೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ನಡೆಯಲಿಲ್ಲ ಎನ್ನಲಾಗಿದೆ.

ಈ ಘಟನೆಯಿಂದ ವಿಷಯ ತಿಳಿದ ರೋಗಿ, ಮತ್ತು ರೋಗಿಯ ಕಡೆಯವರು ಭಯಭೀತರಾಗಿದ್ದಾರೆ. ಒಂದೇ ವಾರದಲ್ಲಿ ಎರಡು ಘಟನೆಗಳು ಜೆಸಿ ಆಸ್ಪತ್ರೆಯಲ್ಲಿ ನಡೆದಿದೆ ಎಂಬ ಮಾತು ಸಾರ್ವಜನಿಕವಾಗಿ ಕೇಳಿ ಬರುತ್ತಿದೆ.



Join Whatsapp