ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಡಿ.16 ರಂದು ವಿಜಯ ದಿವಸ ಆಚರಣೆ ಕಾರ್ಯಕ್ರಮವನ್ನು ಆಚರಿಸಲು ನಿಗದಿ ಮಾಡಿತ್ತು. ಇದೀಗ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ಕಾರಣಾಂತರಗಳಿಂದ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ ಎಂದು ಜಿಲ್ಲಾ ಇಲಾಖೆಯ ಉಪನಿರ್ದೇಶಕ ಡಾ|| ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220925 ನ್ನು ಸಂಪರ್ಕಿಸುವುದು ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.