ಶಿವಮೊಗ್ಗ: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ

Prasthutha|

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾದ ಘಟನೆ ಶಿವಮೊಗ್ಗ ಕ್ಲಾರ್ಕ್‌ ಪೇಟೆಯಲ್ಲಿ ವರದಿಯಾಗಿದೆ.

- Advertisement -

ಮೃತರನ್ನ ಭುವನೇಶ್ವರಿ, ಮಾರುತಿ ಹಾಗೂ ದರ್ಶನ್‌ ಎಂದು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.

ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ಇವರ ಮನೆಯ ಕಡೆಯಿಂದ ಯಾವುದೇ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಬಂಧಿಕರೊಬ್ಬರು ಮನೆಯ ಬಳಿಗೆ ವಿಚಾರಿಸಲು ಬಂದಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ



Join Whatsapp