Home ಟಾಪ್ ಸುದ್ದಿಗಳು ಶಿವಮೊಗ್ಗ: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾದ ಘಟನೆ ಶಿವಮೊಗ್ಗ ಕ್ಲಾರ್ಕ್‌ ಪೇಟೆಯಲ್ಲಿ ವರದಿಯಾಗಿದೆ.

ಮೃತರನ್ನ ಭುವನೇಶ್ವರಿ, ಮಾರುತಿ ಹಾಗೂ ದರ್ಶನ್‌ ಎಂದು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.

ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇವರ ಮನೆಯ ಕಡೆಯಿಂದ ಯಾವುದೇ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಬಂಧಿಕರೊಬ್ಬರು ಮನೆಯ ಬಳಿಗೆ ವಿಚಾರಿಸಲು ಬಂದಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ

Join Whatsapp
Exit mobile version