Home ಟಾಪ್ ಸುದ್ದಿಗಳು ಶಿವಮೊಗ್ಗ: ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ವಿನಯ್ ನಿಧನ

ಶಿವಮೊಗ್ಗ: ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ವಿನಯ್ ನಿಧನ

ತೀರ್ಥಹಳ್ಳಿ : ತೀರ್ಥಹಳ್ಳಿಯ ಪ್ರತಿಭಾನ್ವಿತ ಖೋ ಖೋ ಆಟಗಾರ ವಿನಯ್ (33) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.


ಕಳೆದ 7 ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ವಿನಯ್ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ ಮೆದುಳಿಗೆ ಏರಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ರಾಷ್ಟ್ರಮಟ್ಟದಲ್ಲಿ ಮಿಂಚಿದ್ದ ಮಲೆನಾಡಿನ ಹೆಮ್ಮೆಯ ಪ್ರತಿಭೆಯಾಗಿದ್ದ ವಿನಯ್ ವಿದ್ಯಾರ್ಥಿದೆಸೆಯಿಂದಲೇ ಖೋ ಖೋ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದರು.


ವಿನಯ್ ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿ ತಂದಿದ್ದರು. ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ಪ್ರತಿನಿಧಿಸಿ ಎರಡು ಬಾರಿ ರನ್ನರ್​ ಅಪ್​ ಆಗಿದ್ದರು.ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು. 

ವಿನಯ್ ಅವರ ವಿಯೋಗವು ಕ್ರೀಡಾಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.ತೀರ್ಥಹಳ್ಳಿ ತಾಲೂಕಿನಲ್ಲಿ ನೀರವ ಮೌನ ಆವರಿಸಿದೆ.

Join Whatsapp
Exit mobile version