Home ಟಾಪ್ ಸುದ್ದಿಗಳು ಶಿವಮೊಗ್ಗ: ಮಂಗನ ಕಾಯಿಲೆ ದೃಢಪಟ್ಟಿದ್ದ ಯುವತಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆ ದೃಢಪಟ್ಟಿದ್ದ ಯುವತಿ ಸಾವು

ಹೊಸನಗರ(ಶಿವಮೊಗ್ಗ): ಮಂಗನ ಕಾಯಿಲೆಯಿಂದ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ) ಬಳಲುತ್ತಿದ್ದ ಯುವತಿ ಮೃತಪಟ್ಟಿದ್ದಾರೆ.

ಹೊಸನಗರ ತಾಲ್ಲೂಕಿನ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು.


ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಿಗ್ಗೆ ಯುವತಿ ಮೃತಪಟ್ಟಿದ್ದಾರೆ.

Join Whatsapp
Exit mobile version