ಶಿವಮೊಗ್ಗ: ಸಿಡಿಲು ಬಡಿದು ಮಹಿಳೆ ಮೃತ್ಯು

Prasthutha|

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಆಶ್ರಯ‌ ಬಡಾವಣೆಯಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಲಕ್ಷ್ಮೀಬಾಯಿ (28) ಮೃತ ಮಹಿಳೆ. ಕುರಿಗಳಿಗೆ ಮೇವು ತರಲು ಹೋದಾಗ ಮರದಡಿ ಮೇವು ಆರಿಸುತ್ತಿದ್ದ ವೇಳೆ ಸಿಡಿಲು ಬಡಿದಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡು ಮಹಿಳೆ ಕೊನೆಯುಸಿರೆಳೆದಿದ್ದಾರೆ. ವಿನೋಬ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಅಫಜಲಪುರದಲ್ಲಿ ಸಿಡಿಲು ಬಡಿದು ರೈತ ಮೃತ್ಯು

ಕಲಬುರಗಿ: ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ರೇವೂರ(ಬಿ) ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಾಳಪ್ಪ ದತ್ತಪ್ಪ ಪೂಜಾರಿ (32) ಮೃತರು. ಗ್ರಾಮದ ಹೊರವಲಯದ ದರ್ಗಾ ಬಳಿಯ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತರ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ರೇವೂರ (ಬಿ) ಠಾನಣೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.