Home ಟಾಪ್ ಸುದ್ದಿಗಳು ಶಿವಮೊಗ್ಗ | ʼಅಲ್ಲಾಹು ಅಕ್ಬರ್ʼ ಘೋಷಣೆ ಕೂಗಿದ ಮಹಿಳೆ ಮಾನಸಿಕ ಅಸ್ವಸ್ಥೆ: ಎಸ್ ಪಿ ಮಿಥುನ್...

ಶಿವಮೊಗ್ಗ | ʼಅಲ್ಲಾಹು ಅಕ್ಬರ್ʼ ಘೋಷಣೆ ಕೂಗಿದ ಮಹಿಳೆ ಮಾನಸಿಕ ಅಸ್ವಸ್ಥೆ: ಎಸ್ ಪಿ ಮಿಥುನ್ ಕುಮಾರ್

ಶಿವಮೊಗ್ಗ: ಶಿವಪ್ಪ ನಾಯಕ ವೃತ್ತದಲ್ಲಿ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್, ಪೊಲೀಸರಿಂದ ಮಹಿಳೆಯ ಹಿನ್ನೆಲೆ, ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದಾಗ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿದೆ ಎಂದರು.

ಮಾನಸಿಕ ರೋಗಕ್ಕೆ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆಯಿದ ಪೊಲೀಸರಿಗೆ ದಾಖಲೆಗಳ ಸಲ್ಲಿಕೆ ಮಾಡಲಾಗಿದ್ದು, 2018 ರಿಂದ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ದೃಢಪಟ್ಟಿದ್ದಾರೆ.

Join Whatsapp
Exit mobile version