ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ: ಯುವಕನಿಗೆ ಕಲ್ಲು ತೂರಾಟ: ಆಸ್ಪತ್ರೆಗೆ ದಾಖಲು

Prasthutha|

ಶಿವಮೊಗ್ಗ: ನಗರದಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಕಲ್ಲು ತೂರಾಟ ನಡೆಸಿ, ಪರಾರಿಯಾದ ಘಟನೆ ನಡೆದಿದೆ.

- Advertisement -

ಗಾಯಗೊಂಡ ಯುವಕನನ್ನು ಪ್ರಕಾಶ್ (25) ಎಂದು ಗುರುತಿಸಲಾಗಿದೆ. ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆತನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಕಲ್ಲು ತೂರಾಟ ಮಾಡಿದೆ ಎಂದು ಆರೋಪಿಸಲಾಗಿದ್ದು, ನಗರದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Join Whatsapp