ನ್ಯಾಯಾಲಯದ ಆದೇಶದ ಬೆನ್ನಲ್ಲೇ ನೂತನ ಸರಕಾರ ರಚನೆಗೆ ಶಿಂಧೆ- ಫಡ್ನವೀಸ್ ಗ್ಯಾಂಗ್ ಭರ್ಜರಿ ತಯಾರಿ

Prasthutha|

ಮುಂಬೈ: ಬಂಡಾಯ ಶಾಸಕರ ನಾಯಕ ಏಕನಾಥ ಶಿಂಧೆ ಮತ್ತು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ನೂತನ ಸರ್ಕಾರ ರಚನೆ ಕುರಿತು ಮುಂದಿನ ಕಾರ್ಯತಂತ್ರದ ರೂಪಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

- Advertisement -

ಸುಪ್ರೀಂ ಕೋರ್ಟ್ ಅದೇಶದಂತೆ ಬಹುಮತ ಸಾಬೀತು ಇಂದು ನಡೆಯಬೇಕಿತ್ತು. ಆದರೆ ನ್ಯಾಯಾಲಯದ ಬಹುಮತ ಸಾಬೀತೀನ ಆದೇಶದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂಬೈನಲ್ಲಿ ಬಿಜೆಪಿಯ ಎಲ್ಲ ಶಾಸಕರು ಒಟ್ಟಿಗೆ ಸೇರುವಂತೆ ಪಕ್ಷದ ರಾಜ್ಯ ಘಟಕದಿಂದ ಸೂಚನೆ ನೀಡಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಯ ಮುಂದಿನ ನಡೆಯೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಮುಂದಿನ ನಿರ್ಧಾರವನ್ನು ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ ಶಿಂಧೆ ಅವರು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

- Advertisement -

ಉದ್ಧವ್ ಠಾಕ್ರೆ ರಾಜೀನಾಮೆ ಬಳಿಕ ಫಡ್ನವೀಸ್ ಅವರ ನಿವಾಸದಲ್ಲಿ ಪಕ್ಷದ ಮುಖಂಡರು ಸಭೆ ನಡೆಸಿದ್ದು, ಸರ್ಕಾರ ರಚನೆ ಕುರಿತು ನಮ್ಮ ಪಕ್ಷದ ನಿಲುವು ಏನು ಎಂಬುದನ್ನು ಗುರುವಾರ ತಿಳಿಸುತ್ತೇನೆ ಎಂದು ಫಡ್ನವೀಸ್ ನಿನ್ನೆ ಹೇಳಿದ್ದರು. .

ಫಡ್ನವೀಸ್ ಮುಖ್ಯಮಂತ್ರಿ ಮತ್ತು ಶಿಂಧೆ ಅವರು ಉಪ ಮುಖ್ಯಮಂತ್ರಿಯಾಗುವ ನಿರೀಕ್ಷೆಯಿದೆ. ವಾರಾಂತ್ಯದಲ್ಲಿ ಫಡ್ನವೀಸ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯೂ ಇದೆ



Join Whatsapp