‘ಮಹಾ’ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ​, ಡಿಸಿಎಂ ಆಗಿ ದೇವೇಂದ್ರ ಫಡ್ನವೀಸ್‌ ಪ್ರಮಾಣ

Prasthutha|

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಅಂತ್ಯಗೊಂಡಿದೆ. ಹಲವು ತಿರುವುಗಳ ಬಳಿಕ ಬಂಡಾಯವೆದ್ದ ಏಕನಾಥ್ ಶಿಂಧೆ ಮಹಾರಾಷ್ಟ್ರ 20 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

- Advertisement -

ಜೊತೆಗೆ ಬಿಜೆಪಿ ಹೈಕಮಾಂಡ್ ಸೂಚನೆಯಂತೆ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಹಾ ಸರ್ಕಾರ ಸಂಪುಟ ಸೇರುವುದಿಲ್ಲ ಎಂದಿದ್ದ ಫಡ್ನವಿಸ್‌ ಮನವೊಲಿಸುವಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಯಶಸ್ವಿಯಾಗಿದ್ದಾರೆ. 

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಾಳ ಠಾಕ್ರೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ರಾಜಭವನದಲ್ಲಿ ರಾಜ್ಯಪಾಲ ಕೋಶ್ಯಾರಿ ಪ್ರತಿಜ್ಞಾವಿಧಿ ಬೋಧಿಸಿದರು.



Join Whatsapp