Home ಟಾಪ್ ಸುದ್ದಿಗಳು ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವು

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವು

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷಿ ಆಗಿರುವ ಪ್ರಭಾಕರ್ ಸೈಲ್ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ.

ಪ್ರಭಾಕರ್ ಸೈಲ್ ಅವರು ಡ್ರಗ್ಸ್ ಪ್ರಕರಣದ ಮತ್ತೊಬ್ಬ ಪ್ರಮುಖ ಸಾಕ್ಷಿ ಕೆ.ಪಿ.ಗೋಸಾವಿ ಅವರ ಅಂಗರಕ್ಷಕರಾಗಿದ್ದರು. ಚೆಂಬೂರಿನ ಮಹುಲ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಸಾವಿಗೀಡಾಗಿದ್ದು, ಹೃದಯಾಘಾತದಿಂದ ನಿಧನರಾಗಿರಬಹುದು ಎಂದು ಶಂಕಿಸಲಾಗಿದೆ.

2021ರ ಅಕ್ಟೋಬರ್ 3ರಂದು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್ ಸಿಬಿ) ತನಿಖಾಧಿಕಾರಿಗಳು ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಸುಮಾರು 20 ಜನರನ್ನು ಬಂಧಿಸಿದ್ದರು.

Join Whatsapp
Exit mobile version