ಶಿರಾ ಉಪಚುನಾವಣೆ | ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ತಡೆ | ಪಕ್ಷೇತರ ಅಭ್ಯರ್ಥಿಯಿಂದ ಪ್ರತಿಭಟನೆ

Prasthutha: November 10, 2020

ತುಮಕೂರು : ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಆಂಬ್ರೋಸ್ ಡಿ.ಮೆಲ್ಲೊ ಅವರು, ತಮಗೆ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಕ್ಕೆ ಬಿಡುತ್ತಿಲ್ಲ ಎಂದು ಆಪಾದಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಂಗಳವಾರ ತುಮಕೂರು ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕೇಂದ್ರದ ಮುಂದೆ ಪಕ್ಷೇತ್ರ ಅಭ್ಯರ್ಥಿ ಆಂಬ್ರೋಸ್ ಡಿ.ಮೆಲ್ಲೊ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಡಿವೈಎಸ್ ಪಿ ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯನ್ನು ಮತ ಕೇಂದ್ರಕ್ಕೆ ಕಳುಹಿಸಿಕೊಟ್ಟರು, ಇದರಿಂದಾಗಿ ಪರಿಸ್ಥಿತಿ ಸರಿಯಾಯಿತು.

ನೀರು ಮಾರಾಟ, ನೋಟು ಬ್ಯಾನ್ ಸೇರಿದಂತೆ ವಿವಿಧ ವಿಚಾರಗಳ ಕುರಿತು ಆಂಬ್ರೋಸ್ ಹಲವು ವರ್ಷಗಳಿಂದ ಮೌನ ಪ್ರತಿಭಟನೆ ಮಾಡುತ್ತಾ ಬಂದಿದ್ದಾರೆ. ದೀರ್ಘಕಾಲೀನ ಮೌನ ಪ್ರತಿಭಟನೆಗಾಗಿ ಜನರಿಗೆ ಚಿರಪರಿಚಿತರಾಗಿರುವ ಆಂಬ್ರೊಸ್ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ