ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ: ಬೆಳಗ್ಗೆ 6ರಿಂದ ಸಂಜೆ 6ರವರೆಗೆ ವಾಹನಗಳಿಗೆ ಅನುಮತಿ

Prasthutha|

ಹಾಸನ: ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್​ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

- Advertisement -

ಸಾರಿಗೆ ಬಸ್ಸ್, ಕಾರು, ಜೀಪು, ದ್ವಿಚಕ್ರ ವಾಹನಗಳು, ಹಾಗೂ  20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶಿಸಿದ್ದಾರೆ.

ಆದರೆ  ಟ್ಯಾಂಕರ್ಸ್, ಕಂಟೇನರ್ ಹಾಗು ಬೃಹತ್ ವಾಹನಗಳಿಗೆ ಸಂಚಾರ ನಿಷೇಧ ಮುಂದುವರೆಯಲಿದೆ.

- Advertisement -

ಭಾರಿ ಮಳೆಯಿಂದ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ75 ರಲ್ಲಿ ರಸ್ತೆ ಕುಸಿತವಾಗಿತ್ತು. ಈ ಕಾರಣದಿಂದ ಕಳೆದ ಒಂದು ತಿಂಗಳಿನಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ವಿಧಿಸಲಾಗಿತ್ತು.

Join Whatsapp