ಶಿರಾಡಿ ಘಾಟ್ ಗುಡ್ಡ ಕುಸಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Prasthutha|

ಹಾಸನ: ಸಕಲೇಶಪುರ ತಾಲ್ಲೂಕಿನ ದೊಡ್ಡತಪಲೆ ಬಳಿ ಸಂಭವಿಸುತ್ತಿರುವ ಭೂಕುಸಿತದ ಸ್ಥಳಕ್ಕೆ ಶನಿವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು.

- Advertisement -


ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

ಗುಡ್ಡ ಕುಸಿತಕ್ಕೆ ಕಾರಣಗಳ ಕುರಿತು ಮಾಹಿತಿ ಪಡೆದರು. ಕೂಡಲೇ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

- Advertisement -


ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲು ಸೂಚನೆ
ಹೊಳೆ ನರಸೀಪುರ ತಾಲ್ಲೂಕಿನ ದೊಡ್ಡಕಾಡನೂರು ಮಾರ್ಗವಾಗಿ ಸಾಗುತ್ತಿದ್ದಂತೆ ಅಪಾಯದ ಸೂಚನೆ ನೀಡುತ್ತಿದ್ದ ವಿದ್ಯುತ್ ಕಂಬಗಳನ್ನು ಬದಲಾಯಿಸಿ, ವೈರ್ ಗಳನ್ನು ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಧೂರವಾಣಿ ಮೂಲಕವೇ ಸೂಚಿಸಿದರು. ಮೈಸೂರು ಮಾರ್ಗವಾಗಿ ಹಾದು ಹೋಗುವಾಗ ಹಾಳಾಗಿದ್ದ ರಸ್ತೆ ವಿಭಜಕಗಳನ್ನು ಗುರುತಿಸಿ ಸರಿ ಪಡಿಸಲು ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಶಾಸಕ ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಹಾಜರಿದ್ದರು



Join Whatsapp