ಶಿರಾಡಿ ಘಾಟ್ ಗುಡ್ಡ ಕುಸಿತ: ಕೇಂದ್ರ ಸಚಿವ ಗಡ್ಕರಿಗೆ ಸಿದ್ದರಾಮಯ್ಯ ಪತ್ರ

Prasthutha|

ಹಾಸನ: ಸಕಲೇಶಪುರ ತಾಲ್ಲೂಕಿನ ದೊಡ್ಡತಪಲೆ ಬಳಿ ಸಂಭವಿಸುತ್ತಿರುವ ಭೂಕುಸಿತದ ಸ್ಥಳಕ್ಕೆ ಶನಿವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಖರ್ಚು ಕಡಿಮೆ ಮಾಡಲು ತಡೆಗೋಡೆ ನಿರ್ಮಿಸದೇ, 90 ಡಿಗ್ರಿಯಲ್ಲಿ ಗುಡ್ಡ ಕಡಿದಿರುವುದಕ್ಕೆ ಆಕ್ರೋಶ ಪಡಿಸಿದ ಸಿದ್ದರಾಮಯ್ಯ, ಕೇಂದ್ರ ಸಚಿವ ಗಡ್ಕರಿ ಅವರಿಗೆ ಪತ್ರ ಬರೆದು ವಿವರಿಸುವುದಾಗಿ ತಿಳಿಸಿದರು.

- Advertisement -


ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

- Advertisement -

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನ ಮಾಡಿಕೊಂಡಿದ್ದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.



Join Whatsapp