ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಇಂದು(ಶನಿವಾರ) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಎಂದು ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಹಾನಿಯಾದ ಕುಟುಂಬದ ಜೊತೆ ಸರ್ಕಾರ ಇರಬೇಕು. ಘಟನೆ ಆಗಿದ್ದರ ಬಗ್ಗೆ ನನಗೆ ಬೇಸರವಿದೆ ಎಂದರು.
ಅವೈಜ್ಞಾನಿಕ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರೀಯಾ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಒಂದೇ ಕುಟುಂಬದ ಐವರು ಮೃತಪಟ್ಟಿರುವುದು ದುರಂತ. 2018 ರಲ್ಲಿ ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೂ ಕುಸಿತ ಆಗಿತ್ತು. ಆಗ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ಹಣ ಕೊಟ್ಟಿದ್ದೆವು ಎಂದು ತಮ್ಮ ಅವಧಿಯಲ್ಲಿ ನಡೆದ ಘಟನೆಯನ್ನು ನೆನೆದರು. ಇನ್ನು ಎನ್ ಡಿಆರ್ ಎಫ್ ಈ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದೆ. ಅದು ಕೇಂದ್ರ ಸರ್ಕಾರದ ಅಂಗವಲ್ಲವೇ?, ಮೊದಲು ಇಂತಹ ಘಟನೆಯಲ್ಲಿ ರಾಜಕಾರಣ ಮಾಡುವುದನ್ನ ರಾಜ್ಯ ಸರ್ಕಾರ ಬಿಡಲಿ ಎಂದು ವಾಗ್ದಾಳಿ ನಡೆಸಿದರು.