ಶಿರ್ವ: ಸಿಡಿಲು ಬಡಿದು ವಿದ್ಯಾರ್ಥಿ ಸಾವು

Prasthutha|

ಶಿರ್ವ: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲಿನ ಆಘಾತಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ.

- Advertisement -


ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಕ್ಷಿತ್ ಪೂಜಾರಿ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.


ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version