Home ಟಾಪ್ ಸುದ್ದಿಗಳು ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ| ಹೈಕೋರ್ಟ್ ಮೆಟ್ಟಿಲೇರಿದ ಲಾಡ್ಲೇ ಮಶಾಕ್ ದರ್ಗಾ ಸಮಿತಿ

ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ| ಹೈಕೋರ್ಟ್ ಮೆಟ್ಟಿಲೇರಿದ ಲಾಡ್ಲೇ ಮಶಾಕ್ ದರ್ಗಾ ಸಮಿತಿ

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ವಕ್ಫ್ ಟ್ರಿಬುನಲ್ ಕೋರ್ಟ್ ಅವಕಾಶ ನೀಡಿದ್ದು, ಈ ಆದೇಶ ಪ್ರಶ್ನಿಸಿ ದರ್ಗಾ ಸಮಿತಿ ಹೈಕೋರ್ಟ್ ಮೆಟ್ಟಿಲೇರಿದೆ.

ದರ್ಗಾದಲ್ಲಿ ರಾಘವ ಚೈತನ್ಯ ಶಿವ ಲಿಂಗವಿದೆ ಎಂದು ಕಳೆದ ವರ್ಷದ ಶಿವರಾತ್ರಿಯಂದು ಶಿವಲಿಂಗಕ್ಕೆ ಪೂಜೆ ಮಾಡಲು ಜಿಲ್ಲಾಡಳಿತ ಅವಕಾಶ ನೀಡಿತ್ತು. ಇದರಿಂದಾಗಿ ಸ್ಥಳದಲ್ಲಿ ಘರ್ಷಣೆಯುಂಟಾಗಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಈ ವರ್ಷವೂ ಶಿವರಾತ್ರಿ ದಿನದಂದು ದರ್ಗಾದಲ್ಲಿ ಹಿಂದೂಗಳ ಪೂಜೆಗೆ ವಕ್ಫ್ ಟ್ರಿಬುನಲ್ ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ, ಅಲರ್ಟ್ ಆಗಿರುವ ಪೊಲೀಸ್ ಪಡೆ, ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಿದೆ. ಪಟ್ಟಣದಾದ್ಯಂತ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಆದ್ರೆ ಇದೀಗ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ದರ್ಗಾ ಸಮಿತಿ ಹೈಕೋರ್ಟ್ ಮೆಟ್ಟಿಲೇರಿದೆ.

ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಗಾ ಸಮಿತಿ, ಶಿವಲಿಂಗ ಪೂಜೆಗೆ ಅವಕಾಶ ನೀಡಬಾರದು ಎಂದು ಅರ್ಜಿ ಸಲ್ಲಿಸಿದೆ. ಇಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹೈಕೋರ್ಟ್ ನಲ್ಲಿ ಯಾವ ಆದೇಶ ಬರಲಿದೆ ಎಂದು ಕಾದು ನೋಡಬೇಕಾಗಿದೆ.

Join Whatsapp
Exit mobile version