ವಿಶ್ವವಿಖ್ಯಾತ ತಾಜ್ ಮಹಲ್ ಆವರಣದೊಳಗೆ ಶಿವನ ಪೂಜೆ ನಡೆಸಲು ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಾಜ್ ಮಹಲ್ ನ ಭದ್ರತೆಗೆ ನಿಯೋಜಿಸಲಾಗಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ, ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಿದ ನಂತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಾಜ್ ಗಂಜ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಉಮೇಶ್ ಚಂದ್ರ ತ್ರಿಪಾಠಿ ತಿಳಿಸಿದ್ದಾರೆ.
ಹಿಂದೂ ಮಹಾಸಭಾದ ಪ್ರಾಂತೀಯ ಅಧ್ಯಕ್ಷೆ ಮೀನಾ ದಿವಾಕರ್ ಅವರು ತಾಜ್ ಮಹಲ್ ಕೇಂದ್ರ ತೊಟ್ಟಿಯ ಬಳಿಯ ಬೆಂಚಿನ ಮೇಲೆ ಇತರ ಇಬ್ಬರೊಂದಿಗೆ ಸೇರಿ ಪೂಜೆ ಸಲ್ಲಿಸಲು ಪ್ರಾರಂಭಿಸಿದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.
ಮೊಘಲ್ ಯುಗದ ಸ್ಮಾರಕವಾಗಿರುವ ತಾಜ್ ಮಹಲ್ ಅನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್‌ಐ) ರಕ್ಷಿಸುವ ಜವಾಬ್ದಾರಿ ವಹಿಸಿಕೊಂಡಿದೆ.