ಮಹಾ ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಶಿವಸೇನೆ, ಕಾಂಗ್ರೆಸ್

Prasthutha|

ಮುಂಬೈ: ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರಕ್ಕೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ ಬೆನ್ನಲ್ಲೇ, ಇದರ ವಿರುದ್ಧ ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

- Advertisement -

ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಜುಲೈ 11ರವರೆಗೆ ಮುಂದೂಡಿದೆ.

16 ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ಹೊರಬೀಳುವ ಮೊದಲೇ ಬಹುಮತ ಸಾಬೀತಿಗೆ ಸೂಚನೆ ನೀಡಿರುವುದು ಕಾನೂನು ಬಾಹಿರ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

- Advertisement -

ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಗೆ ಹೋಗುತ್ತೇವೆ ಎಂದು ಹಿರಿಯ ಮುಖಂಡ ಪೃಥ್ವಿರಾಜ್ ಚೌಹಾಣ್  ಹೇಳಿದ್ದಾರೆ.

ಜೂನ್ 30ರಂದು ಬಹುಮತ ಸಾಬೀತು ಪಡಿಸಬೇಕು ಎಂದು ಪತ್ರದ ಮೂಲಕ ಕೋಶಿಯಾರಿ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದ್ದರು.

ಇಂದು ಸಂಜೆ ವಿಚಾರಣೆ:

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಜೂನ್ 30 ರಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸಂಜೆ 5 ಗಂಟೆಗೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ.
ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೆ.ಬಿ.ಪರ್ಡಿವಾಲಾ ಅವರ ರಜಾಕಾಲದ ಪೀಠದ ಮುಂದೆ ಇಂದು ಸಂಜೆ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಕೋರಿ ಪ್ರಭು ಸಲ್ಲಿಸಿದ್ದ ಅರ್ಜಿಯನ್ನು ಉಲ್ಲೇಖಿಸಿ, “ವಿಶ್ವಾಸಮತ ಯಾಚನೆ ಕಾನೂನು ಬಾಹಿರವಾಗಿದೆ” ಎಂದು ಆರೋಪಿಸಿದರು.
ನಾಳೆ ಬೆಳಿಗ್ಗೆ ಆದೇಶಿಸಲಾದ ವಿಶ್ವಾಸಮತ ಯಾಚನೆಯು ಕಾನೂನುಬಾಹಿರವಾಗಿದೆ, ಏಕೆಂದರೆ ಅದು ಅನರ್ಹತೆಯನ್ನು ಎದುರಿಸುತ್ತಿರುವ ವ್ಯಕ್ತಿಗಳನ್ನು ಒಳಗೊಳ್ಳಲು ಸಾಧ್ಯವಿಲ್ಲ ಎಂದು ಸಿಂಘ್ವಿ ಹೇಳಿದರು.

Join Whatsapp