ಮುಂಬೈ: ಎಂವಿಎ ಮೈತ್ರಿ ಸರ್ಕಾರಕ್ಕೆ ಶಿವಸೇನೆಯ ಶಾಸಕರಿಂದ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಶಿವಸೇನೆ ಉನ್ನತ ನಾಯಕ ಹಾಗೂ ಸಂಸದ ಸಂಜಯ್ ರಾವುತ್ ಮಾಡಿರುವ ಟ್ವೀಟ್ ಭಾರೀ ಸಂಚಲನಕ್ಕೆ ಕಾರಣವಾಗಿದೆ.
‘ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಪಯಣ’ ಎಂದು ಮರಾಠಿಯಲ್ಲಿ ಒಂದೇ ಸಾಲಿನಲ್ಲಿ ಸಂಜಯ್ ರಾವುತ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಈಗ ಸಂಚಲನಕ್ಕೆ ಕಾರಣವಾಗಿದ್ದು, ಮಹಾರಾಷ್ಟ್ರ ಎಂವಿಎ ಸರ್ಕಾರ ಪತನದ ಹಾದಿ ಹಿಡಿಯಿತು ಎನ್ನಲಾಗುತ್ತಿದೆ.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾವುತ್, ಬಂಡಾಯ ಶಾಸಕರ ಜತೆ ಮಾತುಕತೆ ನಡೆಯುತ್ತಿದ್ದು, ಅವರೆಲ್ಲ ಶಿವಸೇನಾದಲ್ಲೇ ಇರಲಿದ್ದಾರೆ ಎಂದು ಹೇಳಿದ್ದರು.