ನವದೆಹಲಿ: ಪ್ರತಿಭಟನೆ ನಡೆಸುತ್ತಿದ್ದ ಶಿವಸೇನಾ ಮುಖಂಡ ಸುಧೀರ್ ಸೂರಿಗೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಅಮೃತಸರದ ದೇವಾಲಯದ ಬಳಿ ನಡೆದಿದೆ.
ಶಿವಸೇನಾ ನಾಯಕರು ಪ್ರತಿಭಟನೆಗಾಗಿ ಜಮಾಯಿಸಿದ್ದ ದೇವಾಲಯದ ಹೊರಗೆ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಗುಂಪಿನಲ್ಲಿದ್ದ ಯಾರೋ ಒಬ್ಬರು ಸುಧೀರ್ ಸೂರಿ ಅವರಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸೂರಿ ವಿರೋಧಿಗಳ ಟಾರ್ಗೆಟ್ ಲಿಸ್ಟ್ ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.