ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಶಿವಸೇನಾ ಶಾಸಕ ಆದಿತ್ಯ ಠಾಕ್ರೆ

Prasthutha|

ಮುಂಬೈ: ಶಿವಸೇನೆ ನಾಯಕ, ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ. ಸದ್ಯ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆ ನಾಂದೇಡ್ ಜಿಲ್ಲೆಯ ಹಿಂಗೋಲಿ ಸಮೀಪದ ಕಳಮ್ನೂರು ತಲುಪಿದೆ.

- Advertisement -

ಆದಿತ್ಯ ಠಾಕ್ರೆ ಅವರೊಂದಿಗೆ ಪಕ್ಷದ ಮುಖಂಡ, ವಿಧಾನ ಪರಿಷತ್ ವಿಪಕ್ಷ ಮುಖಂಡ ಅಂಬಾದಾಸ್ ದಾನ್ವೆ ಮತ್ತು ಮಾಜಿ ಶಾಸಕ ಸಚಿವ್ ಅಹಿರ್ ಉಪಸ್ಥಿತರಿದ್ದರು.

ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರೊಂದಿಗೆ ಆದಿತ್ಯ ಠಾಕ್ರೆ ಹೆಜ್ಜೆ ಹಾಕಿದ್ದಾರೆ. ಕೇರಳದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಆದಿತ್ಯ ಠಾಕ್ರೆ ದಾರಿಯುದ್ದಕ್ಕೂ ನೆರೆದಿದ್ದ ಜನರತ್ತ ಕೈಬೀಸಿದ್ದಾರೆ.

- Advertisement -

ಗುರುವಾರ ಎನ್.ಸಿ.ಪಿ ನಾಯಕರಾದ ಸುಪ್ರಿಯಾ ಸುಳೆ ಮತ್ತು ಜಿತೇಂದ್ರ ಅವ್ಹಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿತ್ತಾದರೂ, ಅನಾರೋಗ್ಯದ ಕಾರಣ ಅವರು ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡ ಮಹಾರಾಷ್ಟ್ರ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

Join Whatsapp
Exit mobile version