ಉತ್ತರ ಪ್ರದೇಶ: 50-100 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಶಿವಸೇನೆ ನಿರ್ಧಾರ

Prasthutha|

ಮುಂಬೈ: ಪಂಚ ರಾಜ್ಯಗಳ ವಿಧಾನಸಭೆಗೆ ಫೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಶಿವಸೇನೆ ಪಕ್ಷವು ಉತ್ತರ ಪ್ರದೇಶದಲ್ಲಿ 50 ರಿಂದ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಶಿವಸೇನೆಯ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಆದರೆ ಏಕಾಂಗಿಯಾಗಿ ಅಥವಾ ಇತರ ಪಕ್ಷಗಳ ಜೊತೆ ಮೈತ್ರಿಮಾಡಿಕೊಳ್ಳುವುದರ ಕುರಿತು ರಾವತ್ ಸ್ಪಷ್ಟಪಡಿಸಿಲ್ಲ.

- Advertisement -

ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಗೆ ರಾಜೀನಾಮೆ ನೀಡಿರುವುದರ ಕುರಿತು ಪ್ರತಿಕ್ರಿಯಿಸಿರುವ ಸಂಜಯ್ ರಾವತ್, ಸ್ವಾಮಿ ಪ್ರಸಾದ್ ಮೌರ್ಯ ಗೆಲುವಿನ ಗಾಳಿ ಬೀಸುತ್ತಿರುವ ಕಡೆಗೆ ಪ್ರಯಾಣಿಸಿದ್ದಾರೆ. ಈ ಬೆಳವಣಿಗೆಯು ಉತ್ತರಪ್ರದೇಶದಲ್ಲಿ ಬಿಜೆಪಿ ಸೋಲುವುದರ ಮುನ್ಸೂಚನೆಯಾಗಿದೆ ಎಂದಿದ್ದಾರೆ. ಇದೇ ವೇಳೆ ಗುರುವಾರ ಉತ್ತರಪ್ರದೇಶಕ್ಕೆ ಬೇಟಿ ನೀಡುವುದಾಗಿ ಸಂಜಯ್ ರಾವತ್ ತಿಳಿಸಿದ್ದಾರೆ

ಮತ್ತೊಂದೆಡೆ ಸಮಾಜವಾದಿ ಪಕ್ಷ ಹಾಗೂ ಇತರ ಸಣ್ಣ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಮುಂಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ NCP ಮುಖಂಡ ಶರದ್ ಪವಾರ್ ಹೇಳಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ ಆದರೆ ಲಕ್ನೋದಲ್ಲಿ ನಡೆಯುವ ಮೈತ್ರಿಕೂಟದ ಸಭೆಯ ಬಳಿಕವಷ್ಟೇ ಅಂತಿಮ ಚಿತ್ರಣ ಸ್ಪಷ್ಟವಾಗಲಿದೆ ಎಂದು ಪವಾರ್ ಹೇಳಿದ್ದಾರೆ.

- Advertisement -

ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ್ ಹಾಗೂ ಮಣಿಪುರ ರಾಜ್ಯಗಳ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಫ್ರಬ್ರವರಿ 10 ಹಾಗೂ ಅಂತಿಮ ಹಂತದ ಮತದಾನ ಮಾರ್ಚ್ 7ರಂದು ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.



Join Whatsapp