ಬಿಜೆಪಿ ವಿರೋಧಿ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದುಗೂಡಬೇಕು : ಶಿವಸೇನೆ

Prasthutha|

ಮುಂಬೈ : ಬಿಜೆಪಿ ವಿರೋಧಿ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಯುಪಿಎ ಬ್ಯಾನರ್ ನಡಿ ಒಂದುಗೂಡಬೇಕು ಎಂದು ಶಿವಸೇನೆ ಮುಖವಾಣಿ ‘ಸಾಮ್ನಾ’ದಲ್ಲಿ ಪ್ರತಿಪಾದಿಸಲಾಗಿದೆ. ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ದುರ್ಬಲವಾಗಿದೆ ಮತ್ತು ಅಸಂಘಟಿತವಾಗಿದೆ ಎಂದು ಅದು ಅಭಿಪ್ರಾಯ ಪಟ್ಟಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರೈತರ ಪ್ರತಿಭಟನೆಯ ಬಗ್ಗೆ ಅಸಡ್ಡೆ ತೋರುತ್ತಿದೆ. ಪ್ರತಿಪಕ್ಷಗಳು ದುರ್ಬಲವಾಗಿರುವುದೇ ಸರಕಾರದ ನಿರಾಸಕ್ತಿಗೆ ಕಾರಣವಾಗಿದೆ ಎಂದು ಅದು ತಿಳಿಸಿದೆ.

- Advertisement -

ಕೇಂದ್ರ ಸರಕಾರವನ್ನು ದೂಷಿಸುವ ಬದಲು ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ತನ್ನ ನಾಯಕತ್ವದ ವಿಷಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದೆ.

- Advertisement -