ದಾವಣಗೆರೆ: ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು.
ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಗುತ್ತೆದಾರರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರೇ ಬಂದು ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ನಗರೋತ್ಥಾನದಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಗುತ್ತೆದಾರರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಯಾರೇ ಬಂದು ದೂರು ನೀಡಿದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.