ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ: ಪರಿಸ್ಥಿತಿ ಶಾಂತ

Prasthutha|

- Advertisement -

ಶಿವಮೊಗ್ಗ: ಭಾನುವಾರ ಸಂಜೆ ನಗರದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದ ಘಟನೆ ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಈಗ ಪರಿಸ್ಥಿತಿ ಶಾಂತವಾಗಿದೆ.

ರಾಗಿಗುಡ್ಡದಲ್ಲಿ 144 ಸೆಕ್ಷನ್​ ಜಾರಿ:ಕಲ್ಲು ತೂರಾಟಗಲಾಟೆಯಲ್ಲಿ ಐದಾರು ಜನರಿಗೆ ಗಾಯಗಳಾಗಿವೆ. ಎಸ್ಪಿ ಮಿಥುನ್ ಕುಮಾರ್​ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಲ್ಲು ತೂರಾಟ ಹತೋಟಿಗೆ ಬಾರದೇ ಹೋದಾಗ ಪೊಲೀಸರು ರಾಗಿಗುಡ್ಡಕ್ಕೆ ಸೀಮಿತವಾಗಿ 144 ಸೆಕ್ಷನ್ ಜಾರಿಗೊಳಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ