ಕಾನೂನು ಬಾಹಿರ ಚಟುವಟಿಕೆ ಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|


ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಪೊಲೀಸರ ಮೇಲೂ ಕಲ್ಲು ಎಸೆದಿದ್ದು, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ. ಶಿವಮೊಗ್ಗ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ರಮ ಕೈಗೊಂಡು, ಶಿವಮೊಗ್ಗದಲ್ಲಿ ಶಾಂತಿ ನೆಲೆಸಿದೆ. ಶಾಂತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Join Whatsapp