ಶಿವಮೊಗ್ಗ: ಕಾಂಗ್ರೆಸ್ ಮುಖಂಡ ಪಿಯೂಸ್ ಡಿಸೋಜ ನಿಧನ

Prasthutha|

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಪ್ರಧಾನ ಪಿಯೂಸ್ ಡಿಸೋಜ (63) ತಡರಾತ್ರಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

- Advertisement -

ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಗೆ 2 ದಿನಗಳ ಹಿಂದೆ ಚಿಕಿತ್ಸೆಗಾಗಿ ಸೇರಿಸಲಾಗಿತ್ತು.

 1984ರಲ್ಲಿ ಅರಸಾಳು ಮಂಡಲ ಪಂಚಾಯಿತಿಯ ಪ್ರಧಾನರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪಿಯೂಸ್ ಡಿಸೋಜ ರಾಜಕೀಯದಲ್ಲಿ ಸಕ್ರಿಯರಾಗಿದ್ದುಕೊಂಡು, ಪ್ರಮುಖ ರಾಜಕಾರಣಿಗಳಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲಾ ನಾಯಕರೊಂದಿಗೆ ಒಡನಾಟವನ್ನು ಹೊಂದಿದ್ದರು.

- Advertisement -

ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರ, ಸಹೋದರಿಯರು ಸಹಿತ ಅಪಾರ ಬಂಧು – ಬಳಗವನ್ನು ಅಗಲಿದ್ದಾರೆ.



Join Whatsapp