ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಪ್ರಧಾನ ಪಿಯೂಸ್ ಡಿಸೋಜ (63) ತಡರಾತ್ರಿ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಗೆ 2 ದಿನಗಳ ಹಿಂದೆ ಚಿಕಿತ್ಸೆಗಾಗಿ ಸೇರಿಸಲಾಗಿತ್ತು.
1984ರಲ್ಲಿ ಅರಸಾಳು ಮಂಡಲ ಪಂಚಾಯಿತಿಯ ಪ್ರಧಾನರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪಿಯೂಸ್ ಡಿಸೋಜ ರಾಜಕೀಯದಲ್ಲಿ ಸಕ್ರಿಯರಾಗಿದ್ದುಕೊಂಡು, ಪ್ರಮುಖ ರಾಜಕಾರಣಿಗಳಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲಾ ನಾಯಕರೊಂದಿಗೆ ಒಡನಾಟವನ್ನು ಹೊಂದಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರ, ಸಹೋದರಿಯರು ಸಹಿತ ಅಪಾರ ಬಂಧು – ಬಳಗವನ್ನು ಅಗಲಿದ್ದಾರೆ.