ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹಾರೋಗೂಳಿಗೆ ಪ್ರಾಥಮಿಕ ಶಾಲೆಯ ಆವರಣಕ್ಕೆ ನುಗ್ಗಿದ ದುಷ್ಕರ್ಮಿಯೋರ್ವ ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ, ಹಾಗೂ ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.
ಗೋವಿಂದ ಎಂಬ ವ್ಯಕ್ತಿ ಶಾಲೆಯ ಮುಖ್ಯ ಶಿಕ್ಷಕರ ಬಳಿ ಬಂದು ಕುಡಿಯಲು ನೀರು ಕೇಳಿದ್ದಾನೆ. ಈ ವೇಳೆ ಮುಖ್ಯ ಶಿಕ್ಷಕರು ನೀರು ನೀಡಲು ನಿರಾಕರಿಸಿದ್ದಾರೆ. ಈ ಕಾರಣದಿಂದ ಆತ ಸೇಡು ತೀರಿಸಿಕೊಳ್ಳಲು ಮೂರ್ತಿಗಳನ್ನು ಕೆಡವಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಗೋವಿಂದ ಎಂಬಾತನ ಮೇಲೆ ಎಸ್‌ಡಿಎಂಸಿ ಅಧ್ಯಕ್ಷ ಸಸಿತೋಟ ಮಂಜುನಾಥ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಹಾತ್ಮ ಗಾಂಧಿ, ಸರಸ್ವತಿ ದೇವಿ, ಸ್ವಾಮಿ ವಿವೇಕಾನಂದ ಮತ್ತು ಗೌತಮ ಬುದ್ಧನ ಪ್ರತಿಮೆಗಳನ್ನು ಧ್ವಂಸಗೊಳಿಸಿದ್ದಾರೆ. ಜತೆಗೆ ಶಾಲೆಯ ಹಿಂಬದಿಯಲ್ಲಿರುವ ಜಮೀನಿನಲ್ಲಿ ಪೈಪ್‌ಲೈನ್ ಒಡೆದಿದ್ದಾರೆ ಎಂದು ಮಂಜುನಾಥ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.