ತುಳು ದೈವಾರಾಧನೆ ನಿಂದನೆ ಮಾಡಿದ ಆರೋಪಿ ಶಿವರಾಜ್ ಸೆರೆ

Prasthutha|

ಮಂಗಳೂರು: ಮಂಗಳೂರು: ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೈಬರ್ ಕ್ರೈಂ ಠಾಣಾ ಪೋಲಿಸರು ಬಂಧಿಸಿದ್ದಾರೆ.

- Advertisement -


ಬೆಂಗಳೂರು ಉತ್ತರ ಜಿಲ್ಲೆಯ ಶಿವರಾಜ್ ಹೆಚ್.ಕೆ. (37) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.


2022ರಲ್ಲಿ ನಕಲಿ ಟ್ವೀಟ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಲಾಗಿತ್ತು ಎನ್ನಲಾಗಿದ್ದು, ಈ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯು ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು ಎಂದು ತಿಳಿದು ಬಂದಿದೆ.