“ರೈತ ಇದ್ರೆನೇ ದೇಶ” | ಕೃಷಿಕರ ಹೋರಾಟಕ್ಕೆ ನಟ ಶಿವರಾಜ್ ಕುಮಾರ್ ಬೆಂಬಲ

Prasthutha|

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಕೃಷಿ ನೀತಿ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕನ್ನಡದ ಜನಪ್ರಿಯ ನಟ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದಾರೆ.

ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ಅವರು, “ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂಬುದಾಗಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.    

- Advertisement -