Home Uncategorized ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಮುತ್ತಿಗೆ

ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಮುತ್ತಿಗೆ

ಬೆಂಗಳೂರು: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಇಂದು ಮುತ್ತಿಗೆ ಹಾಕಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ ನೋವಾಗಿದೆ ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

Join Whatsapp
Exit mobile version