ಮುಂಬೈ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಶಿವಸೇನೆ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. ಕೇಂದ್ರ ಹಾಗೂ ರಾಜ್ಯಗಳ ನಡುವಿನ ಬಾಂಧವ್ಯ ಹದಗೆಡುತ್ತಿದ್ದು, ಇದು ದೇಶದ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆಯಲು ಹೆಚ್ಚು ಸಮಯ ಬೇಕಾಗಿಲ್ಲ ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.
ಶಿವಸೇನೆಯ ಮುಖಪತ್ರಿಕೆ ಸಾಮ್ನಾದ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಹಲವು ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆತಿದೆ ಎಂದು ಅದು ಅಭಿಪ್ರಾಯ ಪಟ್ಟಿದೆ.
ರಾಜಕೀಯ ಲಾಭಕ್ಕಾಗಿ ಜನರಿಗೆ ಹಾನಿ ಮಾಡುತ್ತಿದ್ದೇವೆ ಎಂಬುದನ್ನು ಕೇಂದ್ರ ಸರಕಾರ ಅರ್ಥ ಮಾಡಿಕೊಳ್ಳದಿದ್ದರೆ, ನಮ್ಮ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆಯಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. 2020ನೇ ವರ್ಷದಲ್ಲಿ ಕೇಂದ್ರ ಸರ್ಕಾರದ ಸಾಮರ್ಥ್ಯ ಹಾಗೂ ವಿಶ್ವಾಸಾರ್ಹತೆಯು ಪ್ರಶ್ನಾರ್ಥಕ ಚಿಹ್ನೆಯನ್ನು ಸೃಷ್ಟಿಸುತ್ತದೆ ಎಂದು ಅದು ಹೇಳಿದೆ.