ಚಾಮರಾಜನಗರ ಜಿಲ್ಲಾಸ್ಪತ್ರೆ ಪ್ರಕರಣದ ತನಿಖೆಗೆ ವಿಚಾರಣಾಧಿಕಾರಿಯಾಗಿ ಶಿವಯೋಗಿ ಕಳಸದ ನೇಮಕ

Prasthutha|

►3 ದಿನಗಳಲ್ಲೇ ವರದಿ ನೀಡುವಂತೆ ರಾಜ್ಯ ಸರ್ಕಾರ ಆದೇಶ

- Advertisement -

ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದೊರಕದೆ 23 ರೋಗಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ, ತನಿಖೆ ನಡೆಸಿ, ಮೂರು ದಿನಗಳಲ್ಲಿ ವರದಿ ನೀಡುವಂತೆ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ದಿನಾಂಕ 02-05-2021ರ ಬೆಳಿಗ್ಗೆ 9 ಗಂಟೆಯಿಂದ ದಿನಾಂಕ 03-05-2021ರ ಬೆಳಿಗ್ಗೆ 7 ಗಂಟೆಯವರೆಗೆ ಕೋವಿಡ್-19 ಸೋಂಕಿನಿಂದ ಬಾಧಿತರಾದ ಸುಮಾರು 23 ಸೋಂಕಿತರು ಸಾವಿಗೆ ತುತ್ತಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ತೀವ್ರ ಕಳವಳಕಾರಿಯಾಗಿರುತ್ತದೆ.

- Advertisement -

ಈ ಘಟನೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಕೋವಿಡ್-19 ಸೋಂಕಿತ ಸುಮಾರು 23 ಮಂದಿ ಸಾವಿಗೆ ಕಾರಣವಾದ ಹಿನ್ನಲೆಯಲ್ಲಿ ಪತ್ತೆ ಹಚ್ಚಿ, ಸರ್ಕಾರಕ್ಕೆ ವರದಿ ನೀಡಲು ಶಿವಯೋಗಿ ಕಳಸದ, ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಇವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ವಿಚಾರಣಾಧಿಕಾರಿಗಳು ತಮ್ಮ ತನಿಖಾ ವರದಿಯನ್ನು 3 ದಿವಸಗಳೊಳಗೆ ಸರ್ಕಾರಕ್ಕೆ ಸಲ್ಲಿಸುವುದು

ಈ ಆದೇಶವನ್ನು ವಿಪತ್ತು ನಿರ್ವಹಣೆ ಕಾಯ್ದೆ 2005ರಲ್ಲಿನ ಸೆಕ್ಷನ್ 24(ಇ) ಮತ್ತು (ಎಲ್)ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರ ನಿರ್ದೇಶನದಂತೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಎನ್ ಮಂಜುನಾಥ್ ಪ್ರಸಾದ್ ನೋಟಿಸು ಜಾರಿಗೊಳಿಸಿದ್ದಾರೆ.

Join Whatsapp